ಬೆಂಗಳೂರು (ಏ. 8) ಬೆಂಗಳೂರು ವಿಮಾನ ನಿಲ್ದಾಣ ಹೊಸ ಹೊಸ ಸಾಹಸ ಮಾಡಿಕೊಂಡೇ ಬಂದಿದೆ. ಟಾಟಾ ಗ್ರೂಪ್ ಒಡೆತನದಲ್ಲಿರುವ ಏರ್ ಇಂಡಿಯಾ ಮತ್ತು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (BIAL) ಸಂಸ್ಥೆಗಳ ಮಧ್ಯೆ ಮಹತ್ವದ ಒಪ್ಪಂದಾಗಿದೆ. ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸುವ ಪ್ರಮುಖ ಉದ್ದೇಶವನ್ನು ಇದು ಒಳಗೊಂಡಿದೆ. ವಿಮಾನಯಾನ ಸಂಪರ್ಕ ಹೆಚ್ಚಿಸುವ ಗುರಿ ಹೊಂದಿದ್ದು ವಿಮಾನಯಾನ ವಲಯದಲ್ಲಿನ ಮಹತ್ವದ ಬದಲಾವಣೆಗೆ ಇದು ಕಾರಣವಾಗಬಹುದು.
ಏರ್ ಇಂಡಿಯಾ (ಇತರ ಟಾಟಾ ಗ್ರೂಪ್ ಏರ್ಲೈನ್ಸ್ ಕಂಪನಿಗಳಾದ AIX ಮತ್ತು ವಿಸ್ತಾರಾವನ್ನೂ ಒಳಗೊಂಡು) ಮತ್ತು BIAL ಮುಂದಿನ ಐದು ವರ್ಷಗಳಲ್ಲಿ ಅಂತಾರಾಷ್ಟ್ರೀಯ ಸಂಪರ್ಕ, ಕಾರ್ಯಾಚರಣೆಯ ದಕ್ಷತೆ ಮತ್ತು ಪ್ರಯಾಣಿಕರ ಅನುಭವವನ್ನು ಹೆಚ್ಚಿಸುವ ಟಾರ್ಗೆಟ್ ಇಟ್ಟುಕೊಂಡಿದೆ.
ಹಾಗಿದ್ದರೆ ಈ ಒಪ್ಪಂದದ ಮುಖ್ಯಾಂಶಗಳನ್ನು ನಾವು ತಿಳಿದುಕೊಳ್ಳಬೇಕು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB ಅಥವಾ BLR ವಿಮಾನ ನಿಲ್ದಾಣ) ವರ್ಧಿತ ನೆಟ್ವರ್ಕ್ (enhanced network) ಮೂಲಕ ಟಾಟಾ ಗ್ರೂಪ್ ಏರ್ಲೈನ್ಸ್, ಏರ್ ಇಂಡಿಯಾ ಮತ್ತು ವಿಸ್ತಾರಾದ ಪ್ರೀಮಿಯಂ ಪ್ರಯಾಣಿಕರು ಮತ್ತು ನಿಯಮಿತ ಪ್ರಯಾಣಿಕರಿಗೆ ಮೀಸಲಾದ ಲಾಂಜ್ ನಿರ್ಮಿಸುವುದು ಸೇರಿದಂತೆ ಇತರೆ ಸೌಕರ್ಯ ಒದಗಿಸುವುದನ್ನು ಒಳಗೊಂಡಿದೆ.
ಈ ಒಪ್ಪಂದದ ಭಾಗವಾಗಿ, BLR ವಿಮಾನ ನಿಲ್ದಾಣದಲ್ಲಿ ಎಂಆರ್ಒ (MRO) ಸೌಲಭ್ಯಗಳನ್ನು ಸ್ಥಾಪಿಸಲು ಏರ್ ಇಂಡಿಯಾ ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಇದು ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಏರ್ ಇಂಡಿಯಾದ ಬದ್ಧತೆಯನ್ನು ಒತ್ತಿಹೇಳುತ್ತದೆ.
ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್ ಮಾತನಾಡಿ, ದಕ್ಷಿಣ ಭಾರತದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ, BLR ವಿಮಾನ ನಿಲ್ದಾಣವು ದಕ್ಷಿಣ ಮತ್ತು ಮಧ್ಯ ಭಾರತದಲ್ಲಿ ಪ್ರಾಥಮಿಕ ಅಂತಾರಾಷ್ಟ್ರೀಯ ಗೇಟ್ವೇ ಆಗಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಈ ಸಹಯೋಗದ ಮೂಲಕ ಭಾರತೀಯ ವಾಯುಮಾರ್ಗಗಳ ಹಬ್ ಆಗಿ ಅಭಿವೃದ್ಧಿಪಡಿಸುವ ನಾಗರಿಕ ವಿಮಾನಯಾನ ಸಚಿವಾಲಯದ ದೃಷ್ಟಿಕೋನದಲ್ಲಿ ಹೊಂದಿಕೆಯಾಗಲಿದೆ. ಇದರಿಂದ ನಮ್ಮ ಪ್ರಯಾಣಿಕರ ಪ್ರಯಾಣದ ಅನುಭವವನ್ನು ಇನ್ನಷ್ಟು ಹೆಚ್ಚಿಸುವ ನಮ್ಮ ಬದ್ದತೆಗೆ ಸಾಕ್ಷಿಯಾಗಿದೆ. ಬೆಂಗಳೂರಿನಿಂದ ಹೊರಹೋಗುವ ಅರ್ಧದಷ್ಟು ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ನಮ್ಮ ಕ್ಯಾಚ್ಮೆಂಟ್ ಹೆಡ್ ಟು ಯುರೋಪ್, ಉತ್ತರ ಅಮೇರಿಕಾ, ಆಸ್ಟ್ರೇಲಿಯಾ ಮತ್ತು ಪೂರ್ವಕ್ಕೆ ಹೋಗಬಹುದು, ಏರ್ ಇಂಡಿಯಾದೊಂದಿಗಿನ ನಮ್ಮ ಮೈತ್ರಿಯು ಈ ಗುರಿಯತ್ತ ಗಣನೀಯ ಏರಿಕೆಯನ್ನು ಸಾಧಿಸಲಿದೆ. ಮುಂದಿನ ಐದು ವರ್ಷಗಳಲ್ಲಿ BLR ವಿಮಾನ ನಿಲ್ದಾಣದಿಂದ ದೀರ್ಘ-ಪ್ರಯಾಣದ ಮಾರ್ಗಗಳ ಗಮನಾರ್ಹ ಪಾಲನ್ನು ಹೊಂದುವ ಗುರಿಯನ್ನು ಹೊಂದಿದ್ದೇವೆ ಎಂದರು.
ಪರ್ಸನಲ್ ಫೈನಾನ್ಸ್ ಕುರಿತ ಲೆಟೆಸ್ಟ್ ಅಪ್ಡೇಟ್ಗಳಿಗೆ Money9 App ಡೌನ್ಲೋಡ್ ಮಾಡಿಕೊಳ್ಳಿ